Posts Tagged ‘kundapur kannada’

“ನೆನಪಿರಲಿ” ಪಿಚ್ಚರಿನ ಕೂರಕ್ ಕುಕ್ರಳ್ಳಿ ಕೆರೆ ಹಾಡು…ಕುಂದಾಪ್ರ ಸ್ಟೈಲಗೆ … (ಅಣಕ ಬರದ್ದ್ -ವಿಜಯರಾಜ್ ಕನ್ನಂತ) ಎಲ್ಲಾ ಹಕ್ಕು ಕಾಯ್ದಿರಿಸಲಾಗಿದೆ ಹ್ವಾಯ್ ಯಾರದ್ ಹೆದ್ರಕಂಬರ್ …ಅಂಡ್ಕಂಬರ್ ಹೊಕ್ಕಂಬರ್ , ಮಂಡಿ ಜಪ್ಕಂಬರ್, ಹಳೀನ್ ಹಿಂಡಲಗೆ ಮಾತಾಡ್ವರ್, ಸಂತಿಯಗೆ ಪಿಸಿ-ಪಿಸಿ ಅಂಬರ್ ಕುಂದಾಪುರ್ದಂತ ತಾಲೋಕಗೆ ಆಯ್ಕಂಡ್ ಕಾಂಬುಕ್ ಬೇಕಾದ್ದೆಲ್ಲ ಇದ್ದೂ ಹೊಳಿ,ಕಾಡ್ ಗುಡ್ಡಿ ಇದ್ರೂ, ಪ್ರೀತಿ ಮಾಡುಕ್ ಜಾಗ ಇದ್ರೂ ಕಳ್ರ ಕಣಂಗೆ ಮಿಣ್ಣಗೆ ಹೊತ್ರ್ಯಲ್ಲ… ಬನಿಯೇ.. ಇಲ್ಕಾಣಿಯೇ … ನಾನ್ ಲವ್ ಮಾಡು ಸ್ಟೈಲ್ ಒಂಚೂರ್ ಕಲಿನಿಯೇ [...]

ಹಿಲಾಲ್ ಹಿಡಿ, ದಾನಿ ಸೊಳಿ ಅಂತಾ ಇಪ್ಪುದ್, ಚಂಯ ಚಂಯ ಅಂಬುದು   ಹಿಲಾಲ್ ಹಿಡಿ, ಹಿಲ್ಲಾಲ್ ಹಿಡಿ – ತಮಾಷೆ ಮಾಡು, ಗೇಲಿ ಮಾಡು ಹಿಲಾಲು ಶಬ್ದದ್ ಅರ್ಥ ನಿಜವಾಯಿ ಕಾಂಬುಕೆ ಹೋರೆ -‘ಬಟ್ಟೆಯನ್ನು ಎಣ್ಣೆಯಲ್ಲಿ ನೆನೆಸಿ ಮಾಡಿದ ದೊಂದಿ’ ಅಂತಿತ್ತ್. ದೇವ್ರ್ ಮೂರ್ತಿ ಉತ್ಸವದ್ ಸಮಿಗೆ ರಾತ್ರಿ ಹಿಡಿತ್ರಲ ಆ ನಮನಿ ದೊಂದಿ. ಬೌಶ ಇದು ಮಾಡದ್ ತಪ್ಪನ್ ಬೆಳ್ಕಿಗೆ ಹಿಡುದ್ ಅಂಬ್ ಅರ್ಥದಗೆ ಬಂದ ನುಡಿಕಟ್ ಅಂದೇಳಿ ಕಾಣತ್   ಬಳಕೆ – [...]

  ಪಕ್ತಾ, ಫಕ್ತಾ – ಬರೀ   ಇದ್ ಬಂದದ್ ಮರಾಠಿ ಮೂಲದಿಂದ. ಮೂಲ ಶಬ್ದ ‘ಫಕ್ತ್’.   ಬಳಕೆ – ೧.         ಅವ್ನಿಗೆ ಪಕ್ತಾ ಆಡು ಗಿರ ಬಿಟ್ರೆ ಮತ್ತೆಂತ ಇಲ್ಲ( ಏಗ್ಳಿಕೆ ಕಂಡರೂ ಅಂತ ಬೇಕಾರ್ ಅರ್ಥ ಮಡ್ಕಂಬ್ಕೆ ಅಡ್ಡಿಲ್ಲ) ೨.         ಅವ ಇತ್ತಿತ್ಲಾಯಿ ಪಕ್ತಾ ಸುಳ್ಳ್ ಹೇಳುಕ್ ಕಲ್ತಿದ   ಹತ್ತಾ, ಹತ್ತ – ಪೂರ್ಣ, ಸಂಪೂರ್ಣ   ಬಳಕೆ – ೧.         ಸ್ನಾನಕ್ಕೆ ಹೋದನು ನೀರ್ ಹತ್ತ ಕಾಲಿ ಮಾಡ್ಬೆಡ. ನಂಗೂ [...]

ಅಲ್ಲ ಮರಾಯ್ರೆ ಕುಂದಾಪ್ರದಗೆ ಈ ಸರ್ತಿ ಎಲೆಕ್ಷನ್ ಭಯಂಕರ ಟೈಟ್ ಅಂಬ್ರಲಾ ಹೌದೇ ಇದು? ಯಾರ್ ಬಾಯಗ್ ಕೇಂಡ್ರೂ ಒಂದೇ ಮಾತಪ್ಪಾ.. ಈ ಸರ್ತಿ ಯಾರ್ ಗೆಲ್ಲೂದ್ ಅಂದೇಳಿ ಈಗ್ಳೇ ಹೇಳುದ್ ಕಷ್ಟಾ ಮಾರ್ರೆ.. ಶೆಟ್ರಿಗೂ ಹೆಗ್ಡೆಯರಿಗೂ ಜೋರ್ ಫೈಟ್ ಇತ್ತ್ ಗೊತ್ತಿತಾ? ಯಾರ್ ಗೆದ್ರೂ ಮೂರ್ನಾಕ್ ಸಾವ್ರದ್ ಒಳ್ಗೇ ಕಾಣಿ ಬೇಕಾರೆ… ಎಂತಾರೂ ಓಟಿನ್ ಪೆಟ್ಗಿ ಬಿಚ್ಚುವರಿಗೆ ಎಂತದೂ ಹೇಳುಕ್ ಬತ್ತಿಲ್ಲ್ಯೇ…   ಅದೆಂತದೋ ಕ್ಷೇತ್ರ ವಿಭಜನೆ ಅಂಬ್ರಪ್ಪ. ಅದನ್ ಮಾಡಿ ನಮ್ ಬ್ರಹ್ಮಾವರದ್ ಹೆಗ್ಡಿಯರಿಗ್ [...]

ನಂಗಂತೂ ನಮ್ ಕುಂದಾಪ್ರ ಕನ್ನಡ ಕೇಂಡ್ರೆ ಅಷ್ಟಿಷ್ಟ್ ಖುಷಿ ಆಪುದಲ್ಲ ಗೊತ್ತಿತ? ಅದ್ರಗೂ ಈಗ ಕೆಲ್ಸ ಮಾಡುಕ್ ಅಂತೆಳಿ ಊರ್ ಬಿಟ್ಟ್ ಬೆಂಗ್ಳೂರ್ ಸೇರ್ಕಂಡ್ ಮೇಲೆ ಯಾರೆ ಕುಂದಾಪ್ರದರ್ ಸಿಕ್ರೂ ಅವ್ರನ್ ಒಂದ್ಸಲ ಕುಂದಾಪ್ರ ಕನ್ನಡದಗೆ ಮಾತಾಡ್ಸ್‌ದಿದ್ರೆ ಸಮಾಧಾನವೇ ಆತಿಲ್ಲ. ಬೆಂಗ್ಳೂರಾಗಂತೂ ಬಿಡಿ ಆ ಭಾಷಿ ಈ ಭಾಷಿ ಅಂತೇಳಿ ಎಲ್ಲಾರೂ ಸೇರ್ಕಂಡ್ ಬೆಂಗ್ಳೂರ್ ಕನ್ನಡ ಅಂಬುದ್ ಒಳ್ಳೇ ಕಿಚಿಡಿ ಆದ್ ಕಂಡ್ಮೇಲೆ…ಇನ್ನೂ ಗಮಗಮ ಅಂತೆಳಿ ಪರಿಮಳ್ ಬಪ್ಪ ಕುಂದಗನ್ನಡ ಕೆಮಿ ಮೇಲೆ ಬಿದ್ರೆ ಆಪ್ ಖುಷಿ [...]